ಪಾಕ್ ಜೊತೆ ನಮಗೆ ಬೇಡ ಯಾವುದೇ ಸಂಬಂಧ: ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಪಾಕಿಸ್ತಾನದೊಂದಿಗೆ ಭಾರತ ಎಲ್ಲಾ ರೀತಿಯ ಕ್ರಿಕೆಟ್ ಸಂಬಂಧವನ್ನು ಕೂಡ ಕಡಿದುಕೊಳ್ಳಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಒತ್ತಾಯಿಸಿದ್ದಾರೆ.

ಪಹಲ್ಗಾಮ್ ಉಗ್ರರ ದಾಳಿಯನ್ನು ಖಂಡಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಭಾರತ ಯಾವುದೇ ಸಂಬಂಧ ಇಟ್ಟುಕೊಳ್ಳಬಾರದು .ಐಸಿಸಿ ಮತ್ತು ಏಷ್ಯನ್ ಟೂರ್ನಿಗಳಲ್ಲಿಯೂ ಆಡಬಾರದು ಎಂದು ಆಗ್ರಹಿಸಿದರು.

ಪ್ರತಿ ವರ್ಷ ಇಂತಹ ಘಟನೆಗಳು ನಡೆಯುತ್ತಿರುವುದು ತಮಾಷೆಯಾಗಿ ಮಾರ್ಪಟ್ಟಿದೆ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹರಿಹಾಯ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!