ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ: ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಜಗದೀಶ್ ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದರು.

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ನಿರ್ಧಾರ ಮಾಡಿದ್ದಾರೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಇದು ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!