ರಾಜಕೀಯ, ನಿಂದನೆ ಎರಡೂ ಬೇಡ: ಸೇತುವೆ ದುರಂತ ಕುರಿತು ಖರ್ಗೆ ಮಾತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್‌ನ ಮೊರ್ಬಿ ಪಟ್ಟಣದ ಮಚು ನದಿಯ ಕೇಬಲ್ ಸೇತುವೆ ಕುಸಿತದ ಘಟನೆಯನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ ಮತ್ತು ಈ ವಿಷಯದಲ್ಲಿ ಯಾರನ್ನೂ ದೂಷಿಸಲು ಬಯಸುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ತನಿಖಾ ವರದಿ ಬಂದ ನಂತರ ಸಂಪೂರ್ಣ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.

ಘಟನೆಯಿಂದಾದ ಸಾವು-ನೋವಿಗೆ ವಿಷಾದ ವ್ಯಕ್ತಪಡಿಸಿದರು. ಪೂರ್ಣ ಪ್ರಮಾಣದ ತನಿಖೆ ನಡೆಸಿ ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಿಂದ ವಿಶೇಷ ಸಮಿತಿ ರಚಿಸಬೇಕು ಎಂದು ಸಲಹೆ ನೀಡಿದರು.

ಇದು ಬಹಳ ದುಃಖದ ಘಟನೆ. ಪ್ರತಿಯೊಂದು ಕೋನದಲ್ಲೂ ಕೂಲಂಕುಷವಾಗಿ ತನಿಖೆ ಮಾಡಬೇಕು. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶರಿಂದ ವಿಶೇಷ ಸಮಿತಿ ರಚಿಸಿ ತನಿಖೆ ನಡೆಸಬೇಕು. ಅಲ್ಲದೆ, ಘಟನೆಯಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಪರಿಹಾರ ಘೋಷಿಸಬೇಕು ಎಂದರು. ಈ ವಿಚಾರದಲ್ಲಿ ರಾಜಕೀಯ ಮಾಡಲು ನಾನು ಬಯಸುವುದಿಲ್ಲ ಜೊತೆಗೆ ನಾನು ಯಾರನ್ನೂ ದೂಷಿಸುವುದಿಲ್ಲ. ಮೊದಲು ವಿಚಾರಣಾ ವರದಿ ಬರಲಿ ನಂತರ ಕೂಲಂಕುಷವಾಗಿ ಪ್ರತಿಕ್ರಿಯೆ ನೀಡುವುದಾಗಿ ಖರ್ಗೆ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!