August 30, 2026
Sunday, August 30, 2026
spot_img

ರಕ್ತ ಕೊಟ್ಟೇವು ಆದರೆ ನೀರನ್ನು ಕೊಡೋದಿಲ್ಲ! ತಮಿಳುನಾಡಿಗೆ ನೀರು ಬಿಡದಂತೆ ಅನ್ನದಾತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾವೇರಿ ನಿಯಂತ್ರಣ ಸಮಿತಿ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್‌ ಕಾವೇರಿ ನೀರನ್ನು 15 ದಿನಗಳ ಕಾಲ ಹರಿಸುವಂತೆ ನೀಡಿರುವ ಆದೇಶವು ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಆದರೆ ಈಗಾಗಲೇ ಭೀಕರ ಬರಗಾಲ ಹಾಗೂ ಮಳೆಯ ಕೊರತೆಯಿಂದ ರೈತರು ಹೈರಾಣಾಗಿದ್ದಾರೆ. ನೀರು ಇಲ್ಲದೇ ಇರುವ ಈ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಟ್ಟರೆ ನಾವೆಲ್ಲಾ ಸಾಯಬೇಕಾ ಎಂದು ಅನ್ನದಾತ ಗರಂ ಆಗಿದ್ದಾರೆ.

ಈ ಆದೇಶವು ಗಾಯದ ಮೇಲೆ ಬರೆ ಎಳೆದಂತಿದೆ ಎಂದು ರೈತರು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಂಡ್ಯ, ಮೈಸೂರು ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡ ಸಂಘಟನೆಗಳು ಮತ್ತು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಪಂಜಿನ ಮೆರವಣಿಗೆ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ನೀರು ಇಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ರೈತರು ಪ್ರಶ್ನಿಸಿದ್ದಾರೆ. ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಕೇವಲ 17 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಇದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿದ್ದು, ಕುಡಿಯುವ ನೀರಿಗೂ ತೀವ್ರ ಅಭಾವ ಎದುರಾಗಲಿದೆ. ಈ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರಿಗೆ ಮರಣ ಶಾಸನ ಎಂದು ಹೇಳಲಾಗಿದೆ. ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಎಚ್ಚರಿಕೆ ನೀಡಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !