ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ರೈತರ ಹಿತವನ್ನು ಲೆಕ್ಕಿಸದೆ, ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದುವರಿದಿದೆ. ಮಂಡ್ಯದಲ್ಲಿ ಇಂದೂ ಕೂಡ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು ರಕ್ತದಲ್ಲಿ ಹೆಬ್ಬೆಟ್ಟು ಒತ್ತಿ ವಿಭಿನ್ನ ಹೋರಾಟಕ್ಕಿಳಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು ʻರಕ್ತ ಕೊಟ್ಟೇವು, ನೀರು ಕೊಡೆವುʼ ಎಂಬ ಘೋಷಣೆಗಳನ್ನು ಕೂಗಿದರು. ತಾವು ಬರೆದಿದ್ದ ಮನವಿ ಪತ್ರಕ್ಕೆ, ರಕ್ತ ಚಿಮ್ಮಿಸಿ ಹೆಬ್ಬಟ್ಟಿನ ಗುರುತು ಹಾಕಿ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಸಲ್ಲಿಸಿದರು.