ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಧ್ಯಮದವರು ಇಲ್ಲದೇ ಇದ್ದಿದ್ರೆ, ಸಿ.ಟಿ ರವಿ ಅವರನ್ನ ಫೇಕ್ ಎನ್‌ಕೌಂಟರ್ ಮಾಡುವಂತಹ ವಿಚಾರ ಪೊಲೀಸ್ ತಂಡಕ್ಕೆ ಇತ್ತು ಅನ್ನಿಸುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅವಕಾಶ ಸಿಕ್ಕಿದ್ರೆ ಸಿ.ಟಿ ರವಿ ಅವರನ್ನು ಮುಗಿಸಬೇಕು ಅಂತಾ ಯೋಚನೆ ಮಾಡಿದ್ದರು ಅನ್ನಿಸುತ್ತೆ. ಆದ್ರೆ ಸರಿಯಾದ ಅವಕಾಶ ಸಿಕ್ಕಿಲ್ಲ. ಮಾಧ್ಯಮದವರಿಂದ ನಮಗೆ ಲೈವ್ ಲೊಕೇಶನ್ ಸಿಗ್ತಾ ಇತ್ತು ಎಂದು ಹೇಳಿದ್ದಾರೆ.
ನಿಜವಾಗ್ಲೂ ನಾವು ಮಾಧ್ಯಮದವರಿಗೆ ಧನ್ಯವಾದ ಹೇಳಬೇಕು. ಅಷ್ಟು ರಾತ್ರಿಯಲ್ಲೂ ಪೊಲೀಸರ ಬೆನ್ನತ್ತಿ, ವಿಡಿಯೋ ಮಾಡಿ, ಲೈವ್ ಲೊಕೇಶನ್ ಹಾಕ್ತಾ ಇದ್ರು. ಹಾಗಾಗಿ ಸಿ.ಟಿ ರವಿ ಅವರನ್ನ ಮುಗಿಸಲು ಅವಕಾಶ ಸಿಕ್ಕಿಲ್ಲ ಎಂದು ಹೇಳಿಕೆ ನೀಡಿದ್ದಾರೆ.