ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿಲ್ಲ ಎಂಬ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬಸವರಾಜ ಬೊಮ್ಮಾಯಿ ದುಃಖದಲ್ಲಿ ಮಾತಾಡಿದ್ದಾರೆ. ಅವರ ಹೇಳಿಕೆಗೆ ನಾನ್ಯಾಕೆ ಬೇಸರ ಮಾಡಿಕೊಳ್ಳಲಿ, ರಾಜ್ಯದ ವಿದ್ಯುತ್ ದರ ಸಂಬಂಧ ನಮ್ಮ ಬಳಿ ಎಲ್ಲಾ ದಾಖಲೆಗಳಿವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸಂಚಾರ ನಿರ್ವಹಣೆ ಬಗ್ಗೆ ಹೆಚ್ಚು ಗಮನಹರಿಸಿದ್ದೇನೆ. ಟ್ರಾಫಿಕ್ ವಿಚಾರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಸಾರ್ವಜನಿಕರಿಂದಲೂ ಮಾಹಿತಿ ಪಡೆಯುತ್ತೇನೆ. ಟ್ರಾಫಿಕ್ ವಿಚಾರವಾಗಿ ಸಾರ್ವಜನಿಕರು, ತಜ್ಞರ ಸಭೆ ನಡೆಸುವೆ ಎಂದರು.