ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಅನ್ನೋದಕ್ಕೆ ನಮ್ಮಲಿದೆ ಸಾಕ್ಷಿ: ಲೋಕಸಭೆಯಲ್ಲಿ ಅಮಿತ್ ಶಾ ಖಡಕ್ ಉತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಅನ್ನೋದಕ್ಕೆ ಸರ್ಕಾರದ ಬಳಿ ದೃಢವಾದ ಸಾಕ್ಷ್ಯಗಳಿವೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ಆಪರೇಷನ್​ ಸಿಂದೂರ್ ಕುರಿತು ಮಾತನಾಡಿದ ಅಮಿತ್ ಶಾ, ಪಾಕ್​ ವೋಟರ್​ ಐಡಿ, ಚಾಕೊಲೇಟ್​​ಗಳು ಸಿಕ್ಕಿವೆ ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದವರು ಅನ್ನೋದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಎಂದು ಕೇಳಿದ್ದಾರೆ.

ಪಹಲ್ಗಾಮ್​​ನಲ್ಲಿ ದಾಳಿ ನಡೆಸಿದ್ದ ಉಗ್ರರು ಪಾಕಿಸ್ತಾನದವರು ಎಂಬುದಕ್ಕೆ ನಿಮ್ಮ ಬಳಿ ಪುರಾವೆ ಏನಿದೆ?, ಅವರು ದೇಶೀಯ ಉಗ್ರರು ಕೂಡ ಆಗಿರಬಹುದಲ್ಲ ಎಂದು ಕಾಂಗ್ರೆಸ್​​ನ ಹಿರಿಯ ನಾಯಕ ಪಿ ಚಿದಂಬರಂ ಸರ್ಕಾರವನ್ನು ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರ ನೀಡಿರುವ ಅಮಿತ್ ಶಾ, ಪಹಲ್ಗಾಮ್​​​ನಲ್ಲಿ ದಾಳಿ ನಡೆಸಿದ್ದ ಉಗ್ರರ ಪೈಕಿ ಮೂವರನ್ನು ಹತ್ಯೆ ಮಾಡಲಾಗಿದೆ, ಉಗ್ರರ ಬಳಿ ಇದ್ದ ಪಾಕಿಸ್ತಾನದ ವೋಟರ್​ ಐಡಿ ಹಾಗೂ ಚಾಕೊಲೇಟ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರು ಪಾಕಿಸ್ತಾನದವರು ಎಂಬುದನ್ನು ಇನ್ನೇನು ಸಾಕ್ಷಿ ಬೇಕು ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ನಿಖರವಾದ ದಾಳಿಗಳನ್ನು ನಡೆಸಿ, ಹಲವಾರು ಭಯೋತ್ಪಾದಕರನ್ನು ಕೊಂದಿವೆ ಎಂದು ಹೇಳಿದರು.

ಪಹಲ್ಗಾಮ್‌ನಲ್ಲಿ ಬಳಸಿದ್ದ ರೈಫಲ್‌ಗಳು, ಹತ್ಯೆಯಾದ ಉಗ್ರನ ಬಳಿ ಸಿಕ್ಕಿದ್ದ ರೈಫಲ್‌ ಒಂದೇ ಅಂತ ಖಚಿತಪಡಿಸಿದ್ದೇವೆ. ನಿನ್ನೆಯೇ ಚಂಡೀಗಢಕ್ಕೆ ವಿಮಾನದಲ್ಲಿ ರೈಫಲ್ ಕಳಿಸಿ ದೃಢಪಡಿಸಿದ್ದೇವೆ. ಪಹಲ್ಗಾಮ್‌ ದಾಳಿಯಲ್ಲಿ ಸಿಕ್ಕಿದ ಗುಂಡು ಮತ್ತು ನಿನ್ನೆ ಚಂಡೀಗಢ ಎಫ್‌ಎಸ್‌ಎಲ್‌ನಲ್ಲಿ ರೈಫಲ್ ಬಳಸಿ ಅದರಿಂದಲೂ ಗುಂಡು ಹಾರಿಸಿ ಖಚಿತಪಡಿಸಿದ್ದೇವೆ. ಈ ಮೂರೂ ರೈಫಲ್‌ಗಳನ್ನ ಬಳಸಿಯೇ ಪಹಲ್ಗಾಮ್‌ನಲ್ಲಿ ದಾಳಿ ಮಾಡಿರೋದು ಖಚಿತವಾಗಿದೆ. ಸತ್ತ ಇಬ್ಬರು ಉಗ್ರರ ಬಳಿ ಪಾಕಿಸ್ತಾನದ ವೋಟರ್ ಐಡಿ ಇತ್ತು. ಅಲ್ಲದೇ ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್ ಪಾಕಿಸ್ತಾನದ್ದೇ ಎಂದು ಇಂಚಿಂಚೂ ಮಾಹಿತಿಯನ್ನ ವಿವರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!