100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ (Gruha Lakshmi) ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಮೈಸೂರಿನ ಮಹಾರಾಜ 1.10 ಕೋಟಿ ಫಲಾನುಭವಿಗಳ ಖಾತೆ ತಲಾ 2,000 ರೂಪಾಯಿ ಜಮೆಯಾಗಲಿದ್ದು, ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಡಿಜಿಟಲ್​ ಕಾರ್ಡ್​ ವಿತರಣೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. 2013-2018ರವರೆಗೆ ಸರ್ಕಾರದ ಅವಧಿಯಲ್ಲಿ ಭರವಸೆ ಈಡೇರಿಸಿದ್ದೆವು. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಗ್ಯಾರಂಟಿ ಈಗಾಗಲೇ ಜಾರಿಯಾಗಿದ್ದು, ಗೃಹಲಕ್ಷ್ಮೀ ಗ್ಯಾರಂಟಿ ಇಂದು ಜಾರಿ ಮಾಡಿದ್ದೇವೆ. ಆ ಮೂಲಕ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಿದ್ದೇವೆ. 1.10 ಕೋಟಿ ಫಲಾನುಭವಿಗಳ ಖಾತೆ ತಲಾ 2,000 ರೂಪಾಯಿ ಜಮೆ ಆಗಲಿದೆ. ದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದ ಯೋಜನೆ ಇಲ್ಲವೆಂದು ಹೇಳುತ್ತೇವೆ ಎಂದರು.

​​ಡಿಸೆಂಬರ್ ಅಥವಾ 2024ರ ಜನವರಿ ತಿಂಗಳಲ್ಲಿ ಯುವನಿಧಿ ಜಾರಿಯಾಗಲಿದೆ. 5 ಗ್ಯಾರಂಟಿ ಜಾರಿಗೆ ವಾರ್ಷಿನ 56,000 ಕೋಟಿ ರೂಪಾಯಿ ವೆಚ್ಚವಾಗಲಿದೆ. 5 ಗ್ಯಾರಂಟಿ ಜಾರಿ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಟ್ಟಿದ್ದೇವೆ. 5 ಗ್ಯಾರಂಟಿಗಳು ನಿಮ್ಮ ಮುಂದಿದೆ, ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮಾತನಾಡಿದ್ದು, ನೂರು ದಿನದಲ್ಲಿ 4 ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಗೆ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಕಾಲ ಮತ್ತೆ ಮರುಕಳಿಸುತ್ತಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ಚಾಮರಾಜನಗರದಿಂದ ಬೀದರ್​​​ವರೆಗೆ ಪಾದಯಾತ್ರೆ ನಡೆಸಿದ್ರು. ಯಾತ್ರೆ ವೇಳೆ ಜನರ ಸಮಸ್ಯೆಗಳನ್ನು ರಾಹುಲ್ ಗಾಂಧಿ ಆಲಿಸಿದರು. ಯಾತ್ರೆ ವೇಳೆ ನನಗೆ, ಸಿದ್ದರಾಮಯ್ಯಗೆ ರಾಹುಲ್ ಹಲವು ಸಲಹೆ ನೀಡಿದರು. ಚುನಾವಣೆ ವೇಳೆ ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು. ಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ಶಪಥ ಮಾಡಿದ್ದೆವು. ಯೋಜನೆಗಳನ್ನು ಜಾರಿ ಮಾಡಿ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!