ಶಿಗ್ಗಾಂವಿಯಲ್ಲಿ ನಮಗೆ ಯಾರೇ ಎದುರಾಳಿ ಇಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ, ಹುಬ್ಬಳ್ಳಿ:

ಕಾಂಗ್ರೆಸ್‌ಗೆ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಎದುರಾಳಿಯೇ ಅಲ್ಲ. ಈ ಬಾರಿ ಚುನಾವಣೆಯಲ್ಲಿ ನಮ್ಮ ಗೆಲುವು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಸಂಜೆ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಬೊಮ್ಮಾಯಿ ಅಲ್ಲಿ ಜಯಗಳಿಸಿರಬಹುದು. ಆದರೆ ಈಗ ಎದುರಾಳಿ ಇಲ್ಲ ಅಂತಲ್ಲ. ಆಗ ನಮ್ಮ ಅಭ್ಯರ್ಥಿ ಪಠಾಣ್ ೬೮ ಸಾವಿರ ಮತಗಳ ಪಡೆದಿದ್ದರು. ಅವರಿಗೆ ಕೊನೆಯ ಗಳಿಗೆಯಲ್ಲಿ ಟಿಕೆಟ್ ನೀಡಲಾಗಿತ್ತು. ಆದರೂ ಸಹ ಉತ್ತಮ ಸ್ಪರ್ಧೆ ನೀಡಿದ್ದೇವೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಇದೇ ಬೊಮ್ಮಾಯಿ ವಿಧಾನಸಭೆಯಲ್ಲಿ ಸ್ಪರ್ದಿಸಿದ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ೮ ಸಾವಿರ ಮತ ಹೆಚ್ಚು ಪಡೆದಿದ್ದರು. ನಮ್ಮ ಅಭ್ಯರ್ಥಿ ಸಮರ್ಥರಾಗಿದ್ದು, ನಮಗೆ ಯಾರೇ ಎದುರಾಳಿ ಇಲ್ಲ ಎಂದು ಹರಿಹಾಯ್ದರು.

ಮೂರು ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಗೆ ನಾವು ಸಂಪೂರ್ಣ ಸಿದ್ಧರಾಗಿದ್ದೇವೆ. ಚನ್ನಪಟ್ಟಣ ಜನತೆಗೆ ಭಾವನಾತ್ಮಕವಾಗಿ ಮಾತನಾಡುವುದು, ಅಳುವುದು ನೋಡಿ ಸಾಕಾಗಿದೆ. ಇವರ ಅಳುವುದಕ್ಕೆ ಜನರು ಸ್ಪಂದಿಸುವುದಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಸೈಯದ್ ಅಜ್ಜಂಪೀರ್ ಖಾದ್ರಿ ಸಹ ಟಿಕೆಟ್ ಕೇಳಿದ್ದರು. ಅವರ ಹೆಸರು ಹೈಕಮಾಂಡ್ ಕಳುಹಿಸಲಾಗಿತ್ತು. ಕಳೆದ ಬಾರಿ ಪಠಾಣ್ ಅವರು ಚುನಾವಣೆ ಸ್ಫರ್ದಿಸಿದ್ದರಿಂದ ಈಗ ಅವರಿಗೆ ಅವಕಾಶ ನೀಡಲಾಗಿದೆ. ಖಾದ್ರಿ ಸಹ ಅರ್ಹ ಅಭ್ಯರ್ಥಿಯಾಗಿದ್ದಾರೆ. ಇಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡಬೇಕು. ನಾವು ಅವರ ಮನವೊಲಿಸುತ್ತೇವೆ ಎಂದು ತಿಳಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!