ರಾಮ ಮಂದಿರಕ್ಕೆ ನಮ್ಮ ವಿರೋಧ ಇಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನ ಆಗಿದೆ. ತೀರ್ಪಿನಂತೆ ದೇವಾಲಯ ನಿರ್ಮಾಣ ಆಗಲಿದೆ. . ರಾಮಮಂದಿರದಿಂದ ಮತದಾರರು ಬದಲಾವಣೆ ಆಗುತ್ತಾರೆ ಅನ್ನೋದು ತಪ್ಪು. ದೇಶದ ಜನ ವಿವಿಧತೆಯಲ್ಲಿ ಏಕತೆ ಬಯಸುತ್ತಾರೆ. ಬ್ರಿಟೀಷರು, ಮೊಘಲರ ದಾಳಿಯ ನಂತರವೂ ದೇಶ ಒಂದಾಗಿದೆ. ಬೇರೆ ಬೇರೆ ದೇಶ, ಭಾಷೆ ಇದ್ದರೂ ಒಗ್ಗಟ್ಟು ಇದೆ. ನಾವು ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟುಕೊಂಡವರು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ. ಇಂದು ಮತದಾನ ನಡೆಯುತ್ತಿದೆ. ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ, ರಾಜ್ಯಸ್ಥಾನ ಎಲ್ಲ ಕಡೆ ಕಾಂಗ್ರೆಸ್ ಗೆಲ್ಲುತ್ತೆ. ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲ್ಲ. ಈಗ ನವೆಂಬರ್‌ನಲ್ಲಿ ಇದ್ದೇವೆ. ಲೋಕಸಭೆ ಚುನಾವಣೆಗೆ ಮಾರ್ಚ್ ಕೊನೆಯಲ್ಲಿ ನೋಟಿಫಿಕೇಷನ್ ಆಗಲಿದೆ ಎಂದರು.

ಕರ್ನಾಟಕ, ಸಿದ್ದರಾಮಯ್ಯ ಬಗ್ಗೆ ಪ್ರಧಾನಿ ಮೋದಿಗೆ ಭಯ ಇದೆ. ಆದ್ದರಿಂದಲೇ ಎಲ್ಲ ಕಡೆ ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಮೋದಿ ವಿರೋಧಿಸಿದ್ದರು. ಈಗ ಮೋದಿ ಅವರೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಇತ್ತೀಚೆಗೆ ‘ವಿಕಸಿತ ಭಾರತ್ ಯಾತ್ರೆ’ ಶುರು ಮಾಡಿದ್ದಾರೆ. ಅದರಲ್ಲಿ ಪ್ರಧಾನ ಮಂತ್ರಿಗಳ ಗ್ಯಾರಂಟಿ ಯೋಜನೆ ಅಂತ ಬೋರ್ಡ್ ಹಾಕಿದ್ದಾರೆ. ಪ್ರಧಾನಿ ಯಾರು ನರೇಂದ್ರ ಮೋದಿ ಅಲ್ವ ? ಇದನ್ನೇ ರಾಜಕೀಯ ಇಬ್ಬಂದಿತನ ಅನ್ನೋದು ಎಂದು ಪ್ರಧಾನಿ ವಿರುದ್ಧವೂ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!