ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ನಲ್ಲಿ ಇಂದು ‘ಗೋಹತ್ಯೆ ನಿಷೇಧ’ ಕಾಯ್ದೆ ಗದ್ದಲ ಜೋರಾಗಿದ್ದು, ಈ ವೇಳೆ ‘ಗೋಹತ್ಯೆ ನಿಷೇಧ’ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ.
ಕಾಯ್ದೆ ಬಗ್ಗೆ ಪಕ್ಷದ ಒಳಗಡೆ ಚರ್ಚೆ ನಡೆಯುತ್ತಿದೆ, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಸಭಾಪತಿ ಹೊರಟ್ಟಿ ಗೋಹತ್ಯೆ ಬಗ್ಗೆ ದಾಖಲೆ ಏನಾದ್ರೂ ಇದ್ರೆ ನೀಡಲಿ. ಪರಿಶೀಲಿಸಿ ಅವಕಾಶ ನೀಡುತ್ತೇವೆ ಎಂದರು.