August 18, 2026
Tuesday, August 18, 2026
spot_img

ನಾವು ಜು.25ರ ವರ್ತಕರ ಮುಷ್ಕರ ವಾಪಾಸ್ ಪಡೆದಿಲ್ಲ: ಅಧ್ಯಕ್ಷ ರವಿಶೆಟ್ಟಿ ಬೈಂದೂರು ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ವಾಣಿಜ್ಯ ತೆರಿಗೆ ನೋಟಿಸ್ ವಿರೋಧಿಸಿ ಜುಲೈ.25ರಂದು ವರ್ತಕರು ಕರೆ ನೀಡಿದ್ದ ಬಂದ್ ವಾಪಾಸ್ ಪಡೆಯಲಾಗಿದೆ ಎನ್ನಲಾಗುತ್ತಿತ್ತು. ಆದರೇ ಇದೀಗ ಕರ್ನಾಟಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿಶೆಟ್ಟಿ ಬೈಂದೂರು ಅವರು ಸ್ಪಷ್ಟನೆ ನೀಡಿದ್ದು, ನಾವು ಮುಷ್ಕರ ವಾಪಾಸ್ ಪಡೆದಿಲ್ಲ ಎಂಬುದಾಗಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಗೆ ಕರೆ ಕೊಟ್ಟಿರುವವರನ್ನು ಬಿಟ್ಟು ಬೇರೆಯವರ ಜೊತೆಗೆ ಸಭೆ ನಡೆಸಿದ್ದಾರೆ. ಬೇರೆಯವರ ಜೊತೆ ಸಭೆ ನಡೆಸಿ ಬಂದ್ ಹಿಂಪಡೆದಿರುವುದಾಗಿ ಸಿಎಂ ಹೇಳಿದ್ದಾರೆ. ಇದು ಸರಿಯಲ್ಲ. ನಾವು ಮುಷ್ಕರ ವಾಪಾಸ್ ಪಡೆದಿಲ್ಲ ಎಂಬುದಾಗಿ ಸಂಘದ ಅಧ್ಯಕ್ಷ ರವಿಶೆಟ್ಟಿ ಬೈಂದೂರು ತಿಳಿಸಿದರು.

ಜುಲೈ.25ರಂದು ಎಲ್ಲಾ ಕಾಂಡಿಮೆಂಟ್ಸ್, ಬೇಕರಿ, ಅಂಗಡಿಗಳು ಬಂದ್ ಆಗುತ್ತೆ ಎಂಬುದಾಗಿ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !