Friday, July 1, 2022

Latest Posts

ಚಾಮರಾಜನಗರಕ್ಕೆ ಮಧ್ಯ ರಾತ್ರಿಯೇ 250 ಆಕ್ಸಿಜನ್ ಸಿಲಿಂಡರ್ ಕಳುಹಿಸಿದ್ದೇವೆ: ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ

ಹೊಸದಿಗಂತ ವರದಿ, ಮೈಸೂರು:

ಮೈಸೂರಿನಿಂದ ಆಕ್ಸಿಜನ್ ಪೂರೈಕೆಯಾಗದೆ ಇದ್ದುದ್ದರಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ಭಾನುವಾರ ರಾತ್ರಿ 12.30 ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗಿದೆ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿ ಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು ಅದನ್ನು ಸರಿಯಾದ ಸಮಯದಲ್ಲಿ ಬಂದಿದ್ದೇಯಾ ಇಲ್ಲವೋ ಗೊತ್ತಿಲ್ಲ. ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತ ವಾಗಿ 250 ಆಕ್ಸಿಜನ್ ಸಿಲಿಂಡರ್ ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿರೋದು ದಾಖಲೆಯಲ್ಲಿದೆ. ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜನಗರಕ್ಕೆ ಭಾನುವಾರ ಮಧ್ಯರಾತ್ರಿಯೆ ರವಾನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss