July 22, 2026
Wednesday, July 22, 2026
spot_img

ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ: ಉಪರಾಷ್ಟ್ರಪತಿ ಚುನಾವಣೆ ಕುರಿತು ಡಿಕೆಶಿ ರಿಯಾಕ್ಷನ್ !

ಹೊಸದಿಗಂತ ಡಿಜಿಟಲ್ ಡೆಸ್ಕ್:

INDIA ಮೈತ್ರಿಕೂಟ ಉಪರಾಷ್ಟ್ರಪತಿ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿದೆ. ನಾವು ಆತ್ಮಸಾಕ್ಷಿಯ ಮತಗಳನ್ನು ಕೋರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಹೇಳಿದರು.

ತಮಿಳುನಾಡಿನ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಕುರಿತಾಗಿ ಮಾತನಾಡಿದ ಅವರು, ಇಂಡಿಯಾ ಒಕ್ಕೂಟ ಮತ್ತು ವಿರೋಧ ಪಕ್ಷಗಳು ಎನ್‌ಡಿ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ವಿರುದ್ಧ ಮತ ಚಲಾಯಿಸುತ್ತವೆ. ಅಡ್ಡ ಮತದಾನವಾಗುವ ಸಾಧ್ಯತೆ ಇರುತ್ತೆ. ಆದರೆ ನಾನು ಆತ್ಮಸಾಕ್ಷಿಯ ಮತಗಳ ಬಗ್ಗೆ ನಂಬಿಕೆಯಿಟ್ಟಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !