ಮಹಿಳೆಯರ ಮೇಲಿನ ದೌರ್ಜನ್ಯ ಪ್ರಶ್ನಿಸಲು ನಮಗಿದೆ ಧೈರ್ಯ, ನಿಮಗೆ ಇಲ್ವಾ?: ವಿಪಕ್ಷಗಳಿಗೆ ಸ್ಮೃತಿ ಇರಾನಿ ತಿರುಗೇಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ಮಾತನಾಡಲು ವಿಪಕ್ಷಗಳಿಗೆ ಯಾವಾಗ ಧೈರ್ಯ ಬರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ.

ಮಣಿಪುರ ಸ್ಥಿತಿಗತಿ ಕುರಿತಂತೆ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳು ರಾಜ್ಯಸಭೆಯಲ್ಲಿ ಬುಧವಾರವೂ ಗದ್ದಲ ಎಬ್ಬಿಸಿದವು.

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್​ನ ಆಮೀ ಯಾಗ್ನಿಕ್​ ಮಣಿಪುರದಲ್ಲಿನ ಘರ್ಷಣೆ ಕುರಿತು ಮಹಿಳಾ ಸಚಿವೆಯರು ಯಾಕೆ ತಮ್ಮ ಧ್ವನಿಯನ್ನು ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ

ಈ ವೇಳೆ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ, ಮಹಿಳಾ ಸಚಿವರು ಹಾಗೂ ಮಹಿಳಾ ರಾಜಕಾರಣಿಗಳು ಮಣಿಪುರದ ಬಗ್ಗೆ ಮಾತ್ರವಲ್ಲ ರಾಜಸ್ಥಾನ, ಛತ್ತೀಸ್‌ಗಢ, ಬಿಹಾರದ ಬಗ್ಗೆಯೂ ಮಾತನಾಡುತ್ತಾರೆ. ರಾಜಸ್ಥಾನ, ಛತ್ತೀಸ್‌ಗಢ, ಬಿಹಾರದ ಬಗ್ಗೆ ಚರ್ಚಿಸಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಹೇಳಿ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​ ಹಾಗೂ ಅದರ ಮಿತ್ರಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಮಾತನಾಡಲು ನಿಮಗೆ ಯಾವಾಗ ಧೈರ್ಯ ಬರುತ್ತದೆ ಖಡಕ್ ಆಗಿ ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!