ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ.
ಪ್ರಧಾನಿ ಮೋದಿ ಭೇಟಿ ನಂತರ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಶೀಘ್ರವೇ ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದೇವೆ.
ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹೈಪವರ ಸಮಿತಿ ಸಭೆಯನ್ನು ತುರ್ತಾಗಿ ನಡೆಸ ಶೀಘ್ರವೇ ಬರ ಪರಿಹಾರ ಒದಗಿಸಬೇಕು ಎಂದು ಪ್ರಧಾನಿ ಅವರನ್ನು ಒತ್ತಾಯಿಸಿದ್ದೇವೆ. ನಮ್ಮ ಎಲ್ಲ ಮನವಿಗಳನ್ನು ಪ್ರಧಾನಿ ಮೋದಿ ಸಂಯಮದಿಂದ ಆಲಿಸಿ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ. ಶೀಘ್ರವೇ ಬರ ಪರಿಹಾರ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.