Thursday, August 11, 2022

Latest Posts

ಪ್ರತಿಭಟನೆ ಮಾಡೋಕೆ ನಮಗೂ ಬರತ್ತೆ, ಆದರೆ ಆ ವೇಳೆ ಕೊರೋನಾ ಹರಡೋ ಸಾಧ್ಯತೆ ಇದೆ: ಸಿದ್ದು ಆಕ್ರೋಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಹುಬ್ಬಳ್ಳಿ:

ಸರ್ಕಾರ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಲು ಅನುಕೂಲ ಮಾಡಿಕೊಟ್ಟಿದೆ, ಈ ರೀತಿ ಸಾವಿನ ಸಮಯದಲ್ಲೂ ರಾಜಕೀಯ ಮಾಡುವವರಿಗೆ ಮನಸಾಕ್ಷಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನಮಗೂ ಎಲ್ಲೆಲ್ಲಿ ಏನೇನು ಅನ್ಯಾಯ ನಡೆಯುತ್ತಿದೆ ಎನ್ನುವುದು ಗೊತ್ತಿದೆ ಆದರೆ ಅದನ್ನೆಲ್ಲಾ ಪರಿಗಣಿಸದೆ, ಕೊರೋನಾ ಸಮಯದಲ್ಲಿ ಜನರ ಜೊತೆ ನಿಂತಿದ್ದೇವೆ ಎಂದಿದ್ದಾರೆ.
ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುವುದು, ಧರಣಿ ಕೂರುವುದು ದೊಡ್ಡ ವಿಷಯ ಅಲ್ಲ, ಆದರೆ ಅದನ್ನು ಮಾಡಲು ಇದು ಸೂಕ್ತ ಸಮಯ ಅಲ್ಲ, ಪ್ರತಿಭಟನೆ ವೇಳೆ ಕೂಡ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ನಾವು ಏನೂ ಮಾಡುವುದಿಲ್ಲ ಎನ್ನುವ ಧೈರ್ಯದ ಮೇಲೆ ಸರ್ಕಾರ ಆಡಿದ್ದೇ ಆಟ ಎನ್ನುವಂತಾಗಿದೆ ಎಂದು ದೂರಿದ್ದಾರೆ.

ಕುಮಾರಸ್ವಾಮಿ ರಾಜಕಾರಣ ಮಾಡುತ್ತಿದ್ದಾರೆ: ಮಂಡ್ಯ ಸಂಸದೇ ಸುಮಲತಾ ಕುಮಾರಸ್ವಾಮಿ ಅವರ ಪುತ್ರನನ್ನು ಸೋಲಿಸಿದಕ್ಕೆ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಸುಮಲತಾ ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ. ಕೆಆರ್ ಎಸ್ ಸುತ್ತಮುತ್ತಲಿನ 20 ಕಿ.ಮೀ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ, ಇದರಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳಿವೆ ಎಂದು ಆರೋಪ ಮಾಡಿದ್ದಾರೆ. ಆದರೆ ಈ ಬಗ್ಗೆ ಸರ್ಕಾರ, ಗಣಿ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕಿತ್ತು. ಆದರೆ ಸರ್ಕಾರ ಸುಮ್ಮನೆ ಇರುವುದನ್ನು ನೋಡಿದ್ರೆ ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದರು.
ಬದಾಮಿಯಿಂದಲೇ ಸ್ಪರ್ಧಿಸುವೆ: ನನಗೆ ಈಗಾಗಲೇ ಹಲವಾರು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಬಂದಿರೋದು ನಿಜ ಆದರೆ ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದರು‌.

ಕಾಂಗ್ರೆಸ್ ಬಣಗಳಿಲ್ಲ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಜಾತಿ ಸಮೀಕ್ಷೆ ನಡೆದು ಎರಡೂವರೆ ವರ್ಷ ಆಯ್ತು‌. ಅದರ ವರದಿಯನ್ನು ಸಲ್ಲಿಕೆ ಮಾಡಲಾಗಿದೆ ‌ ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ‌ ಹೀಗಾಗಿ ಸರ್ಕಾರ ಈ ಬಗ್ಗೆ ಚರ್ಚೆ ನಡೆಸುತ್ತಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss