ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಳೆ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಕುಮಾರಸ್ವಾಮಿ ಅವರಿಗೆ ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದರು. ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿ ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.