ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಅತಿ ಹೆಚ್ಚು ನವೀಕರಿಸಬಹುದಾದ ಇಂಧನವನ್ನು ಹೆಚ್ಚು ಉತ್ಪಾದಿಸುವ ರಾಜ್ಯ ಕರ್ನಾಟ, ನಮ್ಮ ರಾಜ್ಯ ದೇಶದ ಇವಿ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಭಾರತದಲ್ಲಿನ ಅತಿ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಕರ್ನಾಟಕದಲ್ಲಿಯೇ ಇವೆ. ಒಟ್ಟಾರೆ 15 ಸಾವಿರ ಮೆಗಾ ಟನ್ ವಿದ್ಯುತ್ ಪರಿಸರ ಸ್ನೇಹಿ ವಿಧಾನಗಳಲ್ಲಿ ಉತ್ಪಾದನೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಪಾದನೆ ಆಗಲಿದೆ, ಹೈಡ್ರೋಜನ್ ಹಾಗೂ ಅಮೋನಿಯಾ ಉತ್ಪಾದನೆಗೆ ಇನ್ನಷ್ಟು ಒತ್ತು ಸಿಗಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ದಿನಗಳನ್ನು ಇನ್ನಷ್ಟು ಹೊಸ ಮಾದರಿಯ ವಾಹನಗಳು ಪರಿಚಯ ಆಗಲಿವೆ. ಅತಿಹೆಚ್ಚು ಶಕ್ತಿ ಹಾಗೂ ಕಡಿಮೆ ಮಾಲಿನ್ಯದ ಗುರಿಯನ್ನು ಹೊಂದಿದ್ದೇವೆ. ಪ್ರಧಾನಿ ಮೋದಿ ಅವರ ಕನಸನ್ನು ಕರ್ನಾಟಕ ನನಸು ಮಾಡಲಿದೆ ಎಂದಿದ್ದಾರೆ.