Wednesday, July 6, 2022

Latest Posts

ಮೇಕೆದಾಟು ಯೋಜನೆ, ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ಹಿತ ಕಾಪಾಡಲಿದ್ದೇವೆ: ಉಸ್ತುವಾರಿ ಅರುಣ್ ಸಿಂಗ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಕಾವೇರಿ ನೀರಿನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರೈತರು ಹಾಗೂ ರಾಜ್ಯದ ಜನರ ಹಿತವನ್ನು ರಾಜ್ಯ ಬಿಜೆಪಿ ಸರ್ಕಾರ  ಕಾಯಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿಯಾದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದರು.
ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ಜಲವಿವಾದದ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡಲು ಬಿಜೆಪಿ ಕಟಿಬದ್ದವಾಗಿದೆ. ಕಾವೇರಿ ನೀರು ಬಿಡುವ ಹಾಗೂ ಮೇಕೆದಾಟು ಯೋಜನೆ ಬಗ್ಗೆ ರೈತರು ಹಾಗೂ ಜನರಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಇದರ ಬಗ್ಗೆ ವಿಶ್ವಾಸ ಇಡಬೇಕು ಎಂದರು.
ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳಿಂದ  ತಮಿಳುನಾಡಿಗೆ 30 ಟಿಎಂಸಿ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಒಕ್ಕೂಟ ವ್ಯವಸ್ಥೆಯಲ್ಲಿದ್ದುಕೊಂಡು ಗೌರವಿಸುತ್ತೇವೆ.  ಮಂಡಳಿ ನೀಡಿರುವ ಆದೇಶವನ್ನು ಪರಿಶೀಲಿಸಲಾಗುವುದು. ಈ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುತ್ತೇವೆ ಎಂದರು.
ಮೇಕೆದಾಟು ಯೋಜನೆಗೆ ತಮಿಳುನಾಡು ಬಿಜೆಪಿ ಘಟಕ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್  ಮೇಕೆದಾಟು ಯೋಜನೆ ವಿಚಾರದಲ್ಲೂ ರಾಜ್ಯ ಸರ್ಕಾರ ಮತ್ತು ಬಿಜೆಪಿ ಕರ್ನಾಟಕದ ರೈತರ ಹಿತ ಕಾಪಾಡಲಿದೆ ಎಂದು ಭರವಸೆ ನೀಡಿದರು.
ರಾಜ್ಯ ಬಿಜೆಪಿ ಉಸ್ತುವಾರಿ ಬದಲಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಹಾಗಾದರೇ ನೀವೇ ಹೇಳಿ ಯಾರು ಬರುತ್ತಿದ್ದಾರೆ ಎಂದು ಅರುಣ್ ಸಿಂಗ್ ನಗುತ್ತಲೇ ಉತ್ತರಿಸಿದರು.
ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮೈಸೂರು ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳ ಸೋಮಶೇಖರ್, ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss