ಬಾಲಕಾರ್ಮಿಕತೆಯನ್ನು ಹೋಗಲಾಡಿಸಬೇಕಿದೆ: ಮೇಯರ್ ಬಿ.ಜಿ .ಕೃಷ್ಣಪ್ಪ

ಹೊಸದಿಗಂತ ವರದಿ ತುಮಕೂರು:
ಬಾಲಕಾರ್ಮಿಕತೆಯನ್ನು ಹೋಗಲಾಡಿಸಿ ಮಕ್ಕಳಿಗೆ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಎಲ್ಲರೂ ಕೈಜೊಡಿಸಬೇಕಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಜಿ ಕೃಷ್ಣಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜೀವನ ನಿರ್ವಹಣೆ ಮಾಡಲು ಕಷ್ಟವಿರುವ ಕುಟುಂಬಗಳಲ್ಲಿ ಚಿಕ್ಕ ಮಕ್ಕಳನ್ನು ವಿವಿಧ ಕೆಲಸಗಳಿಗೆ ಕಾರ್ಮಿಕರನ್ನಾಗಿ ಮಾಡಿ ದುಡಿಸಿಕೊಳ್ಳಲಾಗುತ್ತಿದೆ ಎಂದ ಅವರು ಚಿಂದಿ ಅಯುವುದು, ಸರ್ಕಲ್ ಗಳಲ್ಲಿ ಭಿಕ್ಷೆ ಬೇಡುವ ಕೆಲಸಗಳಲ್ಲಿ ಭಾಗಿಯಾಗುವುದನ್ನು ತಪ್ಪಿಸಿ ಅವರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

ಬಾಲಕಾರ್ಮಿಕತೆಗೆ ಬಡತನ ಮತ್ತು ಅನಕ್ಷರತೆ ಮುಖ್ಯ ಕಾರಣಗಳಾಗಿದ್ದು, ಸರ್ಕಾರಗಳು ಇವುಗಳನ್ನು ಹೋಗಲಾಡಿಸಲು ಅನೇಕ ಪೂರಕ ಕ್ರಮಗಳನ್ನು ಕೈಗೊಂಡಿದೆ. 6 ರಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುವುದು ಸಂವಿಧಾನಬದ್ದ ಹಕ್ಕಾಗಿದೆ ಎಂದರಲ್ಲದೇ ಮಕ್ಕಳು ಶಿಕ್ಷಣವನ್ನು ಪಡೆದು ಅಧಿಕಾರಿ/ ರಾಜಕೀಯ ಪ್ರತಿನಿಧಿಗಳಾಗಿ ದೇಶವನ್ನು ಮುನ್ನಡೆಸುವವರಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜಿಲ್ಲಾ ನ್ಯಾಯಾಲಯದ ಹಿರಿಯ ನ್ಯಾಯಾದೀಶರಾದ ರಾದ ರಾಘವೇಂದ್ರ ಶೆಟ್ಟಿಗಾರ್ ಆಶಯ ವ್ಯಕ್ತಪಡಿಸಿದರು.

ನಮ್ಮ ಸುತ್ತಮುತ್ತ ಇರುವ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ರೆ ಅಂತಹ ಮಕ್ಕಳನ್ನು ಗುರುತಿಸಿ ಮುನ್ನೆಲೆಗೆ ತಂದು ಶಿಕ್ಷಣ ನೀಡಬೇಕಾಗಿದೆ.ಇಂದು ನ್ಯಾಯಾಂಗ ಕ್ಷೇತ್ರದಲ್ಲಿ ಹೆಚ್ಚೆಚ್ಚು ಹೆಣ್ಣು ಮಕ್ಕಳು ನ್ಯಾಯಾಧೀಶರಾಗಿ ಬರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು ಹೆಣ್ಣುಮಕ್ಕಳು ಶಿಕ್ಷಣವನ್ನು ಪಡೆದು ಉನ್ನತವಾದದನ್ನು ಸಾಧಿಸಬೇಕೆಂದು ತಿಳಿಸಿದರು
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪ್ರತಿಜ್ಞಾವಿಧಿ ಭೋಧಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ನಾವೆಲ್ಲರೂ ಸೇರಿ ಬಾಲಕಾರ್ಮಿಕತೆಯನ್ನು ತೊಲಗಿಸಬೇಕು.ಶಾಲೆಗೆ ಹೋಗದ ಮಕ್ಕಳಿದ್ದರೆ ಅವರಿಗೆ ತಿಳಿಹೇಳಿ ತಮ್ಮಂತೆ ಶಾಲೆಗೆ ಬರಲು ತಿಳಿಸಬೇಕು.ಇಲ್ಲವೇ ಮಕ್ಕಳ ಸಹಾಯವಾಣಿ ಸಂಖ್ಯೆ1098ಕ್ಕೆ ಕರೆ ಮಾಡಿ ತಿಳಿಸಬೇಕು ಎಂದು ಹೇಳಿದರು.
ಉಪವಿಭಾಗಾಧಿಕಾರಿ ಅಜಯ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ನಂಜಯ್ಯ, ಕಾರ್ಮಿಕ ಅಧಿಕಾರಿ ಎಚ್, ಎನ್ ರಮೇಶ್ ಸೇರಿದಂತೆ ಇನ್ನಿತರ ಅಧಿಕಾರಿ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!