ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ವರಿಷ್ಠ , ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರನ್ನು ಹೊಗಳಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡುತ್ತ, ದೇಶದ ನಾಲ್ಕು ದಿಕ್ಕಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮೋದಿ ಹಂಬಲಿಸುತ್ತಿದ್ದಾರೆ. ಅವರ ಈ ಕಾರ್ಯವನ್ನು ನಾವು ಮಾದರಿಯಾಗಿ ತೆಗೆದುಕೊಳ್ಳಬೇಕು ಎಂದರು.
ಇನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಯಾವುದೇ ರೀತಿಯಲ್ಲಿ ಯಾರೊಂದಿಗೂ ನಾವು ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ,ಎರಡು ಪಕ್ಷಗಳ ವಿರುದ್ಧ ನಾವು ನಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತೇವೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು.
ಸಿಎಂ ಇಬ್ರಾಹಿಂ ಪಕ್ಷ ಸೇರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರದ ಕುರಿತು ಹಲವಾರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಆದ್ರೆ, ನನ್ನ ಬಳಿ ಬಂದು ಅವರು ಪಕ್ಷ ಸೇರುವ ಬಗ್ಗೆ ಚರ್ಚೆ ಮಾಡಿಲ್ಲ.ಎಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ಸಿಎಂ ಇಬ್ರಾಹಿಂ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.