ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ: ಧೈರ್ಯ ತುಂಬಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲ್ (Israel)ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ ಕನಿಷ್ಠ 22 ಮಂದಿ ಸಾವಿಗೀಡಾಗಿದ್ದು, ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಆಘಾತ ವ್ಯಕ್ತಪಡಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್‌ ಪರವಾಗಿ ನಿಂತಿದೆ ಎಂದು ಹೇಳಿದ್ದಾರೆ. ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅಲ್ಲಿನ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ಯಾಲೆಸ್ತೀನ್ ಸಶಸ್ತ್ರ ಗುಂಪು ಹಮಾಸ್ ಶನಿವಾರ ಇಸ್ರೇಲ್ ಕಡೆಗೆ 5,000 ಕ್ಕೂ ಹೆಚ್ಚು ರಾಕೆಟ್ ಗಳನ್ನು ಉಡಾಯಿಸಿದ ಪರಿಣಾಮ 22 ಜನರು ಸಾವನ್ನಪ್ಪಿದ್ದು, 545 ಇಸ್ರೇಲಿಗಳು ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!