ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಈಗಾಗಲೇ ಕರ್ನಾಟಕ ಸರ್ಕಾರ ತಲಾ 10 ಲಕ್ಷ ರೂ. ಘೋಷಣೆ ಮಾಡಿತ್ತು. ಇದರೊಂದಿಗೆ RCB ಫ್ರಾಂಚೈಸಿಯ ಆಡಳಿತ ಮಂಡಳಿ ತಲಾ 10 ಲಕ್ಷ ರೂ. ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಜೊತೆಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಚಿಕಿತ್ಸಾ ವೆಚ್ಚವನ್ನೂ ಭರಿಸುವುದಾಗಿ ಭರವಸೆ ನೀಡಿದೆ.