ಹಿಂಸಾಚಾರ, ಭಯೋತ್ಪಾದನೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ: ವಿಶ್ವಸಂಸ್ಥೆಯಲ್ಲಿ ಭಾರತ ಖಡಕ್ ಮಾತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಯಾವುದೇ ರೂಪದ ಭಯೋತ್ಪಾದನೆಯನ್ನು ಬಲವಾಗಿ ವಿರೋಧಿಸುತ್ತದೆ. ಹಿಂಸಾಚಾರದ ವಿರುದ್ಧವೂ ನಿಲ್ಲುತ್ತದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ರುಸಿರಾ ಕಾಂಬೋಜ್ ಹೇಳಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಭಾರತೀಯ ರಾಯಭಾರಿ ರುಸಿರಾ ಕಾಂಬೋಜ್ ಮಾತನಾಡಿ, ಇಸ್ರೇಲ್-ಹಮಾಸ್ ಯುದ್ಧ ಸಂಬಂಧ , ಯುದ್ಧದ ತೀವ್ರತೆಯನ್ನು ಕಡಿಮೆ ಮಾಡಲು ಅಂತಾರಾಷ್ಟ್ರೀಯ ಸಂಸ್ಥೆಗಳು ಕೈಗೊಂಡ ಎಲ್ಲಾ ಕ್ರಮಗಳನ್ನು ಭಾರತ ಸ್ವಾಗತಿಸುತ್ತದೆ. ಜೀವನೋಪಾಯದ ಅಗತ್ಯತೆಗಳು ಪ್ಯಾಲೆಸ್ತೀನ್ ಜನರಿಗೆ ಸಿಗಬೇಕು. ಇದು ಭಾರತದ ನಿಲುವು ಎಂದರು.

ಯಾವುದೇ ರೂಪದ ಭಯೋತ್ಪಾದನೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ನಾವು ಹಿಂಸೆಯ ವಿರುದ್ಧವೂ ನಿಲ್ಲುತ್ತೇವೆ. ಮಾನವೀಯ ಆಧಾರಿತ ತಾತ್ಕಾಲಿಕ ಕದನ ವಿರಾಮ ಪ್ರಯತ್ನಗಳನ್ನು ಭಾರತ ಬೆಂಬಲಿಸುತ್ತದೆ. ಯುದ್ಧಪೀಡಿತ ಪ್ರದೆಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಜೀವನೋಪಾಯವನ್ನು ಒದಗಿಸುವುದು ಮತ್ತು ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡುವುದನ್ನು ಭಾರತ ಎದುರು ನೋಡುತ್ತಿದೆ ಶಾಂತಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!