ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಸರ್ಕಾರ ರಚಿಸಲು ಮಹಾಯುತಿ ಸಿದ್ಧವಾಗುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಹಾಗೂ ಮೈತ್ರಿ ಕೂಟದ ಮುಖಂಡರು ಇಂದು ಸುದ್ದಿಗೋಷ್ಠಿ ನಡೆಸಿ ಸಿಹಿ ವಿನಿಮಯ ಮಾಡಿಕೊಂಡರು.
ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಜಿತ್ ಪವಾರ್, ಮಹಾರಾಷ್ಟ್ರದ ಅಭಿವೃದ್ಧಿಯಿಂದಾಗಿ ಮಹಾರಾಷ್ಟ್ರದ ಜನರು ಮಹಾಯುತಿಯನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ.
ಸಿಎಂ ಏಕನಾಥ್ ಶಿಂಧೆ, ನಮ್ಮ ಸರ್ಕಾರ ಶ್ರೀಸಾಮಾನ್ಯನ ಸರ್ಕಾರವಾಗಿತ್ತು. ಪ್ರಧಾನಿ ಮೋದಿ ಅವರ ಅತ್ಯುತ್ತಮ ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಮಹಿಳೆಯರು, ಮಕ್ಕಳು ಮತ್ತು ರೈತರು ನಮಗೆ ಕೇಂದ್ರ ಬಿಂದುವಾಗಿದ್ದರು. ನಾವು ಕಾಮನ್ ಮ್ಯಾನ್ ಅನ್ನು ಸೂಪರ್ಮ್ಯಾನ್ಗಳಾಗಿ ಪರಿವರ್ತಿಸಲು ಬಯಸುತ್ತೇವೆ ಎಂದಿದ್ದಾರೆ.