ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರದಂದು ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ. ಇದು ರಾಜ್ಯದ ಹಣಕಾಸು ಸಚಿವರಾಗಿ ಅವರ ದಾಖಲೆಯ 17ನೇ ಬಜೆಟ್ ಆಗಿದೆ.
ವಂದೇ ಮಾತರಂ ಮೂಲಕ ಬಜೆಟ್ ಸೆಷನ್ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ಆರಂಭಿಸಿದ್ದು, ಕನ್ನಡಿಗರ ಆಶೋತ್ತರಗಳಿಗೆ ಅನುಗುಣವಾಗಿ ನಮ್ಮ ಸರ್ಕಾರ ನಡೆದಿದೆ. ಮುಂದೆಯೂ ನಡೆಯುತ್ತದೆ ಎಂದು ಹೇಳಿದ್ದಾರೆ.



