ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ನ (ICC World Cup 2023) ಫೈನಲ್ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ (India Vs Australia) ತಂಡ 6ನೇ ಬಾರಿಗೆ ಏಕದಿನ ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಈ ಟೂರ್ನಿಯಲ್ಲಿ ಭಾರತ ತಂಡ ಸತತ 10 ಪಂದ್ಯಗಳನ್ನು ಗೆದ್ದಿದ್ದರೂ ಕೊನೆಯ ಹಾಗೂ ಪ್ರಶಸ್ತಿ ಪಂದ್ಯದಲ್ಲಿ ಸೋಲು ಕಂಡಿತ್ತು. ಆದರೂ ತಂಡದ ಪ್ರದರ್ಶನವನ್ನು ಪ್ರಶಂಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಫೈನಲ್ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದಿದಲ್ಲದೆ, ಪಂದ್ಯದ ಬಳಿಕ ಟೀಂ ಇಂಡಿಯಾ ಆಟಗಾರರ ಡ್ರೆಸ್ಸಿಂಗ್ ಕೋಣೆಗೆ ತೆರಳಿ, ಆಟಗಾರರನ್ನು ಹುರಿದುಂಬಿಸುವ ಕೆಲಸವನ್ನೂ ಮಾಡಿದರು.
ಫೈನಲ್ ಪಂದ್ಯ ಮುಗಿದ ಬಳಿಕ ಭಾರತೀಯ ಆಟಗಾರರ ಡ್ರೆಸ್ಸಿಂಗ್ ಕೋಣೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮೂಲದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಸೇರಿದಂತೆ ತಂಡದ ಇತರ ಆಟಗಾರರನ್ನು ಭೇಟಿ ಮಾಡಿದರು.
ಟೂರ್ನಿಯಲ್ಲಿ ತಂಡದ ಪ್ರದರ್ಶನವನ್ನು ಶ್ಲಾಘಿಸಿದರು. ಆಟಗಾರರನ್ನು ಮೋದಿ ಭೇಟಿ ಮಾಡಿರುವ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಜಡೇಜಾ, ನಾವು ವಿಶ್ವಕಪ್ನಲ್ಲಿ ಅದ್ಭುತ ಜರ್ನಿ ಹೊಂದಿದ್ದೇವು. ಆದರೆ ನಿನ್ನೆಯ ದಿನ ನಮ್ಮದಾಗಿರಲಿಲ್ಲ. ಸೋಲಿನ ಹತಾಶೆಯಲ್ಲಿದ್ದ ನಮಗೆ ಮೋದಿ ಅವರ ಭೇಟಿ ಹೆಚ್ಚಿನ ಉತ್ಸಾಹ ತುಂಬಿದೆ ಎಂದು ಬರೆದುಕೊಂಡಿದ್ದಾರೆ.
ಶಮಿಯನ್ನು ಅಪ್ಪಿದ ಮೋದಿ ಸಮಾಧಾನ ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಶಮಿ, ದುರದೃಷ್ಟವಶಾತ್ ನಿನ್ನೆಯ ದಿನ ನಮ್ಮದಾಗಿರಲಿಲ್ಲ. ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ವಿಶೇಷವಾಗಿ ಡ್ರೆಸ್ಸಿಂಗ್ ಕೋಣೆಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ನಾವು ಮತ್ತೆ ಪುಟಿದೇಳುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಪ್ರೇಕ್ಷಕರ ಜಯಘೋಷಗಳ ನಡುವೆ ಪ್ರಧಾನಿ ಮೋದಿ ಪಂದ್ಯದ ಮಧ್ಯದಲ್ಲಿ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿದರು. ಆಸ್ಟ್ರೇಲಿಯಾ 240 ರನ್ ಚೇಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರವಿಶ್ವಕಪ್ ಟ್ರೋಫಿಯನ್ನು ಪ್ಯಾಟ್ ಕಮಿನ್ಸ್ಗೆ ಹಸ್ತಾಂತರಿಸಿದರು.
ವಿಶ್ವಕಪ್ನಲ್ಲಿ ಟೀಂ ಇಂಡಿಯಾದ ಅಭಿಯಾನದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿರುವ ಪ್ರಧಾನಿ ಮೋದಿ, ಪ್ರೀತಿಯ ಭಾರತ ತಂಡ, ಈ ವಿಶ್ವಕಪ್ನಲ್ಲಿ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತೇವೆ ಎಂದು ಬರೆದುಕೊಂಡಿದ್ದರು.