ಹೊಸದಿಗಂತ ವರದಿ ಮಂಡ್ಯ:
ಅಭಿವೃದ್ಧಿ ಕೆಲಸವೇ ನಮ್ಮ ಗುರಿ. ಅಪಪ್ರಚಾರಕ್ಕೆ ಯಾರೂ ಕಿವಿಗೊಡದಿರಿ ಎಂದು ಶಾಸಕ ಪಿ. ರವಿಕುಮಾರ್ ಅವರು ಜನತೆಗೆ ಸಲಹೆ ನೀಡಿದರು.
ತಾಲೂಕು ಆಡಳಿತದ ವತಿಯಿಂದ ಆಲಕೆರೆ ಗ್ರಾಮದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಿಮ್ಮ ಕೆಲಸಗಳು ಸುಗಮವಾಗಿ ಆಗಬೇಕು. ನಿಮ್ಮ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಂದು ಕೆಲಸ ಮಾಡುತ್ತಿದ್ದೇವೆ. ವಿರೋಧಿಗಳು ಇಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: FOOD | ಟೇಸ್ಟಿ ಚಿಕನ್ ಕೀಮಾ ಪರೋಟ ತಿಂತೀರಾ? ಸಿಂಪಲ್ ರೆಸಿಪಿ ಇಲ್ಲಿದೆ..
ಇತಿಹಾಸದಲ್ಲೇ 35 ಕೋಟಿ ರೂ. ಹಣವನ್ನು ಆಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾರ‌್ಯಗಳಿಗೆ ನೀಡಲಾಗಿದೆ. ನಾಲೆ, ರಸ್ತೆ, ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಆಲಕೆರ ಗ್ರಾಮಕ್ಕೆ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು. ಗ್ರಾಮದಲ್ಲಿ ಕೆಲವು ಆರ್‌ಟಿಸಿ ಸಮಸ್ಯೆ ಇದೆ. ಇವುಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಲು ನಿರ್ಧರಿಸಿದ್ದೇನೆ.
ರಾಜ್ಯವೇ ತಿರುಗಿ ನೋಡುವ ರೀತಿಯಲ್ಲಿ ಗ್ರಾಮದಲ್ಲಿ ಅದ್ದೂರಿಯಾಗಿ ಜಾತ್ರಾ ಮಹೋತ್ಸವ ನಡೆದಿದೆ. ನಾವು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಬೇರೆಯವರ ಅಪಪ್ರಚಾರಕ್ಕೆ ಕಿವಿಕೊಡಬೇಡಿ, ಮೊದಲು ನೀವೆಲ್ಲರೂ ಭ್ರಮೆಯಲ್ಲಿ ಮತ ಹಾಕಿದ್ದಿರಿ. ನಿಮ್ಮ ಆಶೀರ್ವಾದ ಹೀಗೇ ಇರಲಿ ಮುಂದೆ ಮತ್ತಷ್ಟು ಅಭಿವೃದ್ಧಿ ಕಾರ್ಯ ಮಾಡಲು ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.

