ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ, ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಹಾಗೂ ಬೇರೆ ಪಕ್ಷದವರು ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ. ಜಾತಿಗಳ ಪಟ್ಟಿಯಲ್ಲಿ ಅಕ್ಷರಗಳ ಆಧಾರದ ಮೇಲೆ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆ ಮನೆಗೆ ಹೋಗಿ, ಎಲ್ಲರ ಮಾಹಿತಿ ಸಂಗ್ರಹಿಸುತ್ತೇವೆ ಎಂದು ತಿಳಿಸಿದರು.