ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ 7 ಕೋಟಿ ಜನರಿಗೂ ತೃಪ್ತಿಯಾಗುವಂತೆ ಜಾತಿಗಣತಿ ಸಮೀಕ್ಷೆ ನಡೆಯಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇದೇ 22ರಿಂದ ಆರಂಭವಾಗಲಿರುವ ಸಮೀಕ್ಷೆ ಪೂರ್ಣಗೊಂಡ ಬಳಿಕ, ಹಿಂದುಳಿದಿರುವಿಕೆಯ ಗುರುತಿಸುವಿಕೆ, ಅಂಕ ನೀಡುವಿಕೆಯಲ್ಲಿ ಯಾರಿಗೂ ಅನ್ಯಾಯ ಆಗದ ರೀತಿಯಲ್ಲಿ ಎಲ್ಲರ ಅಭಿಪ್ರಾಯ ಪಡೆದೇ ಸರ್ಕಾರ ಮುಂದಡಿ ಇಡಲಿದೆ. ಇದನ್ನು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಎಲ್ಲ 7 ಕೋಟಿ ಜನರಿಗೂ ತೃಪ್ತಿಯಾಗುವ ರೀತಿಯಲ್ಲಿ ಸಮೀಕ್ಷೆ ನಡೆಯಲಿದೆ. ಎಲ್ಲ ಜಾತಿ, ಜನಾಂಗದಲ್ಲೂ ಬಡವರಿದ್ದಾರೆ, ನಿರ್ಗತಿಕರಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಸರ್ಕಾರದ ಯೋಜನೆಯ ಲಾಭ ದೊರಕಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದರು.