ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಮಾಡಿದ ಎಲ್ಲಾ ಅವಾಂತರಗಳನ್ನೂ ಸರಿಪಡಿಸುತ್ತೇವೆ: ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೇಸಿಗೆ ರಜೆ ಮುಗಿದು, ರಾಜ್ಯಾದ್ಯಂತ ಇಂದಿನಿಂದ ಸರ್ಕಾರಿ ಶಾಲೆಗಳು ಮತ್ತೆ ಆರಂಭಗೊಂಡಿವೆ. ಈ ಬೆನ್ನಲ್ಲೇ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಎಲ್ಲಾ ಅವಾಂತರಗಳನ್ನೂ ಸರಿಪಡಿಸುತ್ತೇವೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಹೇಳಿದೆ.

ಕರ್ನಾಟಕ ಕಾಂಗ್ರೆಸ್‌ ಟ್ವಿಟ್ಟರ್ ಖಾತೆಯಲ್ಲಿ, “ಶಾಲೆಗಳು ಆರಂಭಗೊಳ್ಳುತ್ತಿವೆ, ಮಕ್ಕಳ ಶಿಕ್ಷಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಎಲ್ಲಾ ಅವಾಂತರಗಳನ್ನೂ ಸರಿಪಡಿಸುತ್ತೇವೆ. ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ, ಶೂ, ಸಾಕ್ಸ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲು ಕ್ರಮ ಕೈಗೊಳ್ಳುತ್ತೇವೆ” ಎಂದು ಟ್ವೀಟ್‌ ಮಾಡಿದೆ.

https://twitter.com/INCKarnataka/status/1663800285154906112?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!