ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಸ್ವಂತ ಬಲದಿಂದ ಹೋರಾಟ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಡಿ, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಲೋಕಸಭೆ ಚುನಾವಣೆಗೆ ನಾವು ಸ್ವಂತ ಬಲದಿಂದ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ ನಮಗಿದೆ. ಸದ್ಯದಲ್ಲೇ ಗ್ರಾ.ಪಂ, ತಾ.ಪಂ ಹಾಗೂ ಜಿ.ಪಂ ಚುನಾವಣೆ ನಡೆಯಲಿವೆ. ಆ ಚುನಾವಣೆಗಳಿಗೂ ನಾವು ತಯಾರಿ ಮಾಡಬೇಕು ಎಂದರು.
ಜೆಡಿಎಸ್ ಪಕ್ಷ ಉಳಿಯಬೇಕಾದ್ರೆ ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪಕ್ಷ ಸಂಘಟನೆ ಬಗ್ಗೆ ಮುಖಂಡರ ಜೊತೆಗೆ ಮಾತುಕತೆ ನಡೆಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಸಾಕಷ್ಟು ಚರ್ಚೆ ಮಾಡುತ್ತೇವೆ. ಲೋಕಸಭೆ ಚುನಾವಣೆಗೆ ಎಷ್ಟು ಕಡೆ ಅಭ್ಯರ್ಥಿಗಳನ್ನು ಹಾಕಬೇಕು. ಎಲ್ಲೆಲ್ಲಿ ಸ್ಪರ್ಧಿಸಬೇಕೆಂದು ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.