ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಪರ್ಮೀಷನ್ ಇಲ್ಲದೆ ಮಗಳ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ತೇವೆ ಎಂದು ನಟಿ ಆಲಿಯಾ ಹಾಗೂ ರಣ್‌ಬೀರ್ ಕಪೂರ್ ಹೇಳಿದ್ದಾರೆ.
ಸೆಲೆಬ್ರಿಟಿಗಳ ಮಕ್ಕಳ ಫೋಟೊ, ವಿಡಿಯೋ ತೆಗೆದು ತಮ್ಮ ಖಾತೆಗಳಲ್ಲಿ ಜನ ಹಂಚಿಕೊಳ್ಳುತ್ತಿದ್ದಾರೆ. ಎಷ್ಟೋ ಮಂದಿಗೆ ಇದು ಇಷ್ಟ ಇರೋದಿಲ್ಲ. ಆದರೂ ನಮ್ಮ ಮಾತಿಗೆ ಬೆಲೆ ಕೊಡದೆ, ನಮ್ಮ ಪ್ರೈವಸಿ ಹಾಳು ಮಾಡಿ ಫೋಟೊ ತಗೀತಾರೆ ಇದು ತಪ್ಪು ಎಂದಿದ್ದಾರೆ.
ಒಂದು ವೇಳೆ ಕೆಲವರು ಮಾತು ಕೇಳದೇ ಇದ್ದರೆ ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳದೇ ಬೇರೆ ಯಾವುದೇ ಆಯ್ಕೆ ಇಲ್ಲ ಎಂದಿದ್ದಾರೆ. ಕೇರ್ ಮಾಡದೇ ಇರುವವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಟಿ ಎಚ್ಚರಿಕೆ ನೀಡಿದ್ದಾರೆ. ನಟಿಯ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.