ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಭರವಸೆಗಳನ್ನು ಈಡೇರಿಸುತ್ತೇವೆ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾವು ಕರ್ನಾಟಕದ ಜನರ ಪರವಾಗಿ ನಿಂತಿದ್ದೇವೆ. ನಾವು ದ್ವೇಷವನ್ನು ಬಳಸಿಕೊಂಡು ಈ ಯುದ್ಧವನ್ನು ಮಾಡಲಿಲ್ಲ. ಕರ್ನಾಟಕ ಚುನಾವಣೆಯಲ್ಲಿ ಪ್ರೀತಿ ಮತ್ತು ಸಹೋದರತ್ವದಿಂದ ಹೋರಾಡಿ ಗೆದ್ದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ  ಬಹುಮತದೊಂದಿಗೆ ಗೆದ್ದು ಸರ್ಕಾರ ರಚಿಸಲು ಸನ್ನದ್ಧವಾಗಿದ್ದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಕೂಡ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ನಮ್ಮ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ರಾಜ್ಯದ ಜನತೆಗೆ ನನ್ನ ಹೃದಯದಾಳದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕಕ್ಕೆ ನೀಡಿರುವ ಐದು ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು.
ಕರ್ನಾಟಕ ಚುನಾವಣೆಯಲ್ಲಿ ಬಹುಮತ ಸಿಗುತ್ತಿದ್ದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!