ನಾವು ನೂರಕ್ಕೆ ನೂರರಷ್ಟು ದೆಹಲಿಗೆ ಹೋಗುತ್ತೇವೆ ಕಾದು ನೋಡಿ : ಮಾಜಿ ಸಚಿವ ರೇಣುಕಾಚಾರ್ಯ

ಹೊಸದಿಗಂತ ವರದಿ ಕಲಬುರಗಿ:

ಕಾಂಗ್ರೆಸ್ ಸರ್ಕಾರ ರೈತರ,ಬಡವರ ಹಾಗೂ ಮಠ ಮಾನ್ಯಗಳ ಜಮೀನು ಕಬಳಿಸುವ ಹುನ್ನಾರ ನಡೆಸಿದ್ದು, ಕರ್ನಾಟಕ ರಾಜ್ಯದಲ್ಲಿ ಆಗುತ್ತಿರುವ ವಾಸ್ತು ಸ್ಥಿತಿಯನ್ನು ಪಕ್ಷದ ಹೈಕಮಾಂಡ್,ಗೆ ಭೇಟಿಯಾಗಿ ಮನವರಿಕೆ ಮಾಡಲಾಗುವುದು ಎಂದು ಮಾಜಿ ಸಚಿವ ರೇಣುಕಾಚಾರ್ಯ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನೂರಕ್ಕೆ ನೂರರಷ್ಟು ದೆಹಲಿಗೆ ಹೋಗುತ್ತೇವೆ ಕಾದು ನೋಡಿ. ಈಗಲೇ ಎಲ್ಲವನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನೀತಿಗಳ ವಿರುದ್ಧ ಒಂದಾಗಿ ಹೋರಾಟ ಮಾಡಿ ಪಕ್ಷದ ಜೊತೆ ಇರಬೇಕಾದವರು, ಅವರದ್ದೇ ತಂಡ ಮಾಡಿಕೊಳ್ಳುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಹೇಳಿದರು.

ನಾಲ್ಕು ದಶಕಕ್ಕೂ ಅಧಿಕ ಸೈಕಲ್ ತುಳಿಯುವ ಮೂಲಕ ಪಕ್ಷವನ್ನು ಕಟ್ಟಿ ಬೆಳೆಸಿರುವ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಮಾತನಾಡುವುದು ಸರಿಯಲ್ಲ.ನಾವು ಹೋರಾಟ ಯಾರ ವಿರುದ್ಧ ಮಾಡಬೇಕು ಅರಿತುಕೊಳ್ಳಬೇಕು. ಮಾತೇತ್ತಿದ್ದರೇ ಹಿಂದುತ್ವದ ಬಗ್ಗೆ ಮಾತನಾಡುವವರು ತಾವು ಯಾವ ಪಕ್ಕದಲ್ಲಿ ಇದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ರಾಜ್ಯಾದ್ಯಂತ ಪ್ರವಾಸ ಮಾಡಿ, ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಹೋಗುತ್ತಿರುವ ವಿಜಯೇಂದ್ರ ಅವರು ವ್ಯಕ್ತಿಯಲ್ಲ.ಬದಲಾಗಿ ಪಕ್ಷದ ದೊಡ್ಡ ಶಕ್ತಿಯಾಗಿದ್ದಾರೆ. ಹೀಗಾಗಿ ನಾವೆಲ್ಲರೂ ಒಟ್ಟಾಗಿ ಹೋಗಬೇಕಾದರೆ ನಿಮ್ಮ ನಡುವಳಿಕೆಗಳನ್ನು ಬದಲಾ ಮಾಡಿಕೊಳ್ಳಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಂ,ಗೆ ಪರೋಕ್ಷವಾಗಿ ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!