ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಂಪಿಯನ್ಸ್ ಟ್ರೋಫಿ ಇಂಡಿಯಾ ಪಾಕಿಸ್ತಾನಕ್ಕೆ ತೆರಳುವುದು ಬಹುತೇಕ ಇಲ್ಲವಾಗಿದ್ದು, ಹೀಗಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಯಾರು ಬಾರದೇ ಇದ್ದರೂ ನಾವು ಚಾಂಪಿಯನ್ಸ್ ಟ್ರೋಫಿ ಆಯೋಜಿಸುತ್ತೇವೆ ಎಂದು ಐಸಿಸಿ ತಿಳಿಸಿದೆ.
ಹೈಬ್ರಿಡ್ ಮಾದರಿಯಲ್ಲಿ ಪಂದ್ಯ ನಡೆಸಲು ಸಾಧ್ಯವೇ ಎಂದು ಐಸಿಸಿ (ICC) ಪಿಸಿಬಿಯನ್ನು ಕೇಳಿತ್ತು. ಈ ಪ್ರಶ್ನೆಗೆ ಪಿಸಿಬಿ ಭಾರತ ತಂಡ ಪಾಕ್‌ಗೆ ಬರಲಿ ಅಥವಾ ಬಾರದೇ ಇದ್ದರೂ ಇದ್ದರೂ ನಾವು ಟೂರ್ನಿಯನ್ನು ಆಯೋಜಿಸುಸುತ್ತೇವೆ ಎಂದು ಪತ್ರ ಬರೆದಿದೆ.
ಇತ್ತ ಭದ್ರತಾ ದೃಷ್ಟಿಯಿಂದ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿತ್ತು. ಬಳಿಕ ದುಬೈಯಲ್ಲಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯ ನಡೆಸುವ ಬಗ್ಗೆ ಪ್ರಸ್ತಾಪವಾಗಿತ್ತು. ಈಗ ಈ ಎಲ್ಲಾ ಪ್ರಸ್ತಾಪವನ್ನು ಪಾಕಿಸ್ತಾನ ನಿರಾಕರಿಸಿದೆ.
ಈಗಾಗಲೇ ಟಿವಿ ರೈಟ್ಸ್ ಮಾರಾಟವಾಗಿರುವ ಕಾರಣ ಭಾರತ ತಂಡ ಒಂದು ವೇಳೆ ಭಾಗವಹಿಸದೇ ಇದ್ದರೆ ಐಸಿಸಿಗೆ ಭಾರೀ ನಷ್ಟವಾಗಲಿದೆ. ಹೀಗಾಗಿ ಐಸಿಸಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ. 2025ರ ಫೆಬ್ರವರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸಲು ಐಸಿಸಿ ಸಿದ್ಧತೆ ನಡೆಸಿದೆ.
ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ನಂತರ ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.