ಐದು ಗ್ಯಾರಂಟಿಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗ್ಯಾರಂಟಿ ಜಾರಿ ಬಗ್ಗೆ ಅಧಿಕಾರಿಗಳ ಜತೆ ಚರ್ಚೆಯಾಗಿದೆ. ಯಾವ ರೀತಿ ಗ್ಯಾರಂಟಿ ಜಾರಿ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸಚಿವ ಸಂಪುಟದಲ್ಲಿ ಅಂತಿಮವಾಗಿ ಎಲ್ಲವೂ ನಿರ್ಧಾರವಾಗಲಿದೆ ಎಂದರು.

ನಮಗೆ ಮತ ಹಾಕಿದ ಜನರ ಹಿತದೃಷ್ಟಿಯಿಂದ ನಾವು ಕೆಲಸ ಮಾಡುತ್ತೇವೆ. ಜೂನ್ 1 ರಂದು ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ ಅಂತಾ ಯಾರು ಹೇಳಿದ್ದು? 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲ್ಲ ಎಂದಿಲ್ಲ. ಜಾರಿ ಮಾಡೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!