Thursday, September 18, 2025

ಭಾರತೀಯ ರಾಯಭಾರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ: ಖಲಿಸ್ತಾನಿ ಸಂಘಟನೆಯಿಂದ ಬೆದರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಖಲಿಸ್ತಾನಿ ಸಂಘಟನೆ ಸಿಖ್ ಫಾರ್ ಜಸ್ಟೀಸ್ ಬೆದರಿಕೆ ಹಾಕಿದೆ.

ನಿಷೇಧಿತ ಖಲಿಸ್ತಾನಿ ಸಂಘಟನೆ ಸಿಖ್ ಫಾರ್ ಜಸ್ಟೀಸ್ ಸೆಪ್ಟೆಂಬರ್ 18ರಂದು ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಘೋಷಿಸಿದೆ.

ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿರುವ ಸಿಖ್ ಫಾರ್ ಜಸ್ಟೀಸ್, ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನರ್ ದಿನೇಶ್ ಪಟ್ನಾಯಕ್ ಅವರಿಗೆ ಎಚ್ಚರಿಕೆಯನ್ನು ನೀಡಿದ್ದು, ಇಂಡೋ-ಕೆನಡಿಯನ್ನರು ಇವರಿಂದ ದೂರವಿರುವಂತೆ ಎಚ್ಚರಿಸಿದ್ದಾರೆ.

ಇತ್ತೀಚಿಗೆ ಕೆನಡಾ ಸರ್ಕಾರವು ತನ್ನ ನೆಲದಲ್ಲಿ ಖಲಿಸ್ತಾನಿ ಉಗ್ರಗಾಮಿ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ. ಇದು ವಿದೇಶಿ ನಿಧಿಯನ್ನು ಬಳಸಿಕೊಳ್ಳುತ್ತಿವೆ ಎಂದು ಹೇಳಿದ ಬಳಿಕ ಈ ಬೆದರಿಕೆ ಬಂದಿದೆ.

ಇದನ್ನೂ ಓದಿ