Wednesday, September 24, 2025

ಜನರ ಸಮಸ್ಯೆ ನಾವು ಕೇಳ್ತೀವಿ: ರಾಜ್ಯ ಪ್ರವಾಸಕ್ಕೆ ಮುಂದಾದ ನಿಖಿಲ್‌ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆಂದು ಹೇಳಿದ್ದಾರೆ.

ಇದನ್ನೂ ಓದಿ