ಸಾಮರ್ಥ್ಯಗಳನ್ನು ಬಳಸಲು ನಾವು ಎಂದಿಗೂ ಹಿಂಜರಿಯುವುದಿಲ್ಲ: ಇರಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ತನ್ನ ಭೂಪ್ರದೇಶದ ಮೇಲೆ ದಾಳಿ ನಡೆಸಿದರೆ ಅದಕ್ಕೆ ತಕ್ಕ ಉತ್ತರ ನೀಡಲು ಹಿಂಜರಿಯುವುದಿಲ್ಲ ಎಂದು ಇರಾನ್ ಸೋಮವಾರ ಹೇಳಿದೆ.

ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್ ಬೆಂಬಲಿತ ಸೇನಾಪಡೆಗಳ ವಿರುದ್ಧ ದಾಳಿ ಮುಂದುವರಿಯಲಿದೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇರಾನ್ ಮೇಲೆ ನೇರ ದಾಳಿ ನಡೆಯುವ ಸಾಧ್ಯತೆ ಇದೆಯೇ? “ನಾವು ಏನು ಮಾಡಲಿದ್ದೇವೆ ಎಂಬುದರ ಕುರಿತು ನಾನು ಮಾತನಾಡುವುದು ಸೂಕ್ತವಲ್ಲ” ಎಂದು ಸುಲ್ಲಿವಾನ್ ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

“ಆದರೆ ಇರಾನ್ ನಮ್ಮ ಮೇಲೆ ನೇರವಾಗಿ ದಾಳಿ ಮಾಡಿದರೆ, ನಮ್ಮ ಕಡೆಯಿಂದ ಸೂಕ್ತ ರೀತಿಯಲ್ಲಿ ನಾವು ಬಲವಾದ ಪ್ರತಿಕ್ರಿಯೆಯನ್ನು ನೀಡುತ್ತೇವೆ.” ಎಂದಿದ್ದರು.

ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ನಾಸೆರ್ ಕನ್ನಾನಿ, ಸುಲ್ಲಿವಾನ್ ಹೇಳಿಕೆಗೆ ಪ್ರತಿಕ್ರಿಯಿಸಿ “ಇರಾನ್ ತನ್ನ ಭದ್ರತೆ, ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಗೆ ಬೆದರಿಕೆಗಳಿಗೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುತ್ತದೆ.” “ಇರಾನ್ ತನ್ನ ಸಾಮರ್ಥ್ಯಗಳನ್ನು ಬಳಸಲು ಎಂದಿಗೂ ಹಿಂಜರಿಯುವುದಿಲ್ಲ.” ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!