ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮ ಮಂದಿರ ಉದ್ಘಾಟನೆಗೆ ಕಮ್ಯೂನಿಸ್ಟ್ ನಾಯಕರಿಗೆ ಆಮಂತ್ರ ನೀಡಿದ ಬೆನ್ನಲ್ಲೇ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಕಾರಣ ಕಮ್ಯೂನಿಸ್ಟ್ ನಾಯಕರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಾರಾ ಅನ್ನೋ ಕುತೂಹಲ.
ಇದೀಗ ನಿರೀಕ್ಷೆಯಂತೆ CPI(M)ದ ಯಾವುದೇ ನಾಯಕರು ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು CPI(M) ನಾಯಕಿ ಬೃಂದಾ ಕಾರಟ್ ಸ್ಪಷ್ಟಪಡಿಸಿದ್ದಾರೆ.
ಜನವರಿ 22 ರಂದು ಆಯೋಧ್ಯೆಯಲ್ಲಿನ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆಯಲ್ಲಿ CPI(M) ಪಕ್ಷ ಪಾಲ್ಗೊಳ್ಳುವುದಿಲ್ಲ. ಪಕ್ಷ ಇತರರ ಧಾರ್ಮಿಕ ನಂಬಿಕೆಯನ್ನು ಗೌರವಿಸುತ್ತದೆ. ಆದರೆ ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಬಿಜೆಪಿ ರಾಜಕೀಯದಿಂದ ನಾವು ತೆರಳುತ್ತಿಲ್ಲ ಎಂದು ಬೃಂದಾ ಕಾರಟ್ ಸ್ಪಷ್ಟಪಡಿಸಿದ್ದಾರೆ.
ರಾಮ ಮಂದಿರ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಧಾರ್ಮಿಕ ಭಾವನೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಧಾರ್ಮಿಕ ನಂಬಿಕೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಎಷ್ಟು ಸರಿ ಎಂದು ಬೃಂದಾ ಕಾರಟ್ ಹೇಳಿದ್ದಾರೆ.
ಆದರೆ ಬೃಂದಾ ಕಾರಟ್ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಅಸರರು ದೇವಲೋಕ ಪ್ರವೇಶಿಸುವುದಿಲ್ಲ ಎಂದು ಜನ ಕಮೆಂಟ್ ಮಾಡಿದ್ದಾರೆ. ಆಮಂತ್ರಣ ಕಳುಹಿಸದಿದ್ದರೆ, ರಾಮ ಮಂದಿರ ಬಿಜೆಪಿ ಪಕ್ಷದಲ್ಲ, ಪ್ರತಿಯೊಬ್ಬರಿಗೂ ಸೇರಿದೆ ಎನ್ನುತ್ತಾರೆ. ಆಹ್ವಾನಿಸಿದರೆ, ಬಿಜೆಪಿ ರಾಜಕೀಯ ಮಾಡುತ್ತಿದೆ ಎನ್ನುತ್ತಾರೆ. ಕಮ್ಯೂನಿಸ್ಟ್‌ಗಳು ಯಾವಾಗಿನಿಂದ ಧಾರ್ಮಿಕ ಭಾವನೆ ಗೌರವಿಸಲು ಆರಂಭಿಸಿದ್ದು ಎಂದು ಹಲವರು ಕಮೆಂಟ್ ಮಾಡಿದ್ದಾರೆ.