ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ ಮಂಗಳೂರು:‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ, ಕಾನೂನು ಕೈಗೆತ್ತಿಕೊಂಡರೆ ಕೂಡಲೇ ಕಠಿಣ ಕ್ರಮ ಕೈಗೊಳ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವರು ಹಿನ್ನೆಲೆಯಿಂದ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಗಮನಿಸಲು ಹೇಳಿದ್ದೇನೆ.ಡಿಜಿಪಿ ನಿನ್ನೆ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದಾರೆ.
ಕಾನೂನು ಸುವ್ಯವಸ್ಥೆ ಮತ್ತು ಕಾನೂನು ರಕ್ಷಣೆ ಬಗ್ಗೆ ಸೂಚನೆ ಕೊಟ್ಟಿದ್ದಾರೆ ಎಂದರು.

ಮಂಗಳೂರಿನಲ್ಲಿ ಇಂದು ಬಿಜೆಪಿ ವಿಭಾಗೀಯ ಸರಣಿ ಸಭೆಗಳಿವೆ. ಜಿಲ್ಲಾವಾರು ಸಭೆಗಳು ಮತ್ತು ನಾಯಕರ ಸಭೆಗಳಿವೆ. ಚುನಾವಣಾ ತಯಾರಿ ಹಿನ್ನೆಲೆ ವಿಭಾಗ ಮಟ್ಟದ ಸಭೆಗಳನ್ನು ‌ಮಾಡುತ್ತಿದ್ದೇವೆ. ಏ.16 ಮತ್ತು 17 ರಾಜ್ಯ ಕಾರ್ಯಾಕಾರಿಣಿ ಸಭೆ ಮಾಡಿ ಪಕ್ಷದ ಚರ್ಚೆ ಮಾಡುತ್ತೇವೆ ಎಂದರು.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪ್ರಾರಂಭವಾದ ತಕ್ಷಣ ಕುಮಾರಸ್ವಾಮಿ ಜಲಯಾತ್ರೆ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಯಾವುದೇ ಹೇಳಿಕೆ ಕೊಡುವ ಅಗತ್ಯ ಇಲ್ಲ. ಅವರ ಸರ್ಕಾರದಲ್ಲಿ ಏನು ಮಾಡಿದ್ದಾರೆ ಅಂತ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!