ಹೊಸದಿಗಂತ ವರದಿ, ಮೈಸೂರು:
ನಾವು ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ನಾವು 2023ರ ಏಪ್ರಿಲ್ ನಲ್ಲಿ ವಿಧಾನ ಸಭೆಗೆ ಚುನಾವಣೆ ನಡೆಯಬೇಕು ಎಂದು ಬಯಸುತ್ತೇವೆ. ಆದರೆ ಬಿಜೆಪಿಯಲ್ಲಿ ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ. ಅವರು ಕಚ್ಚಾಡಿಕೊಂಡು, ಅವಧಿಗೂ ಮುನ್ನವೇ ಚುನಾವಣೆಗೆ ಬಂದರೆ ಅದನ್ನು ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ನಾವಿಬ್ಬರೂ ಚೆನ್ನಾಗಿದ್ದೇವೆ. ಆದರೆ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಇವೆ ಎಂದು ವಿಪಕ್ಷಗಳು ಹೇಳಿ ಒಡಕು ಮೂಡಿಸಲು ಯತ್ನಿಸುತ್ತಿವೆ ಎಂದು ಕಿಡಿಕಾರಿದರು.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಹತಾಶರಾಗಿ ಟೀಕಿಸುತ್ತಿದ್ದಾರೆ. ಯೋಜನೆ ಬಗ್ಗೆ ಅವರ ಪಕ್ಷದ ಕೊಡುಗೆ ಏನು ಎಂದು ಪ್ರಶ್ನಿಸಿದರು.