ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ಯಾರಿಗೂ ತೊಂದರೆ ನೀಡುವುದಿಲ್ಲ. ಆದರೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ ಎಂದು ಪಾಕಿಸ್ತಾನಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಲು ಉಬುಧವಾರ ಲಕ್ನೋದಲ್ಲಿ ‘ಭಾರತ್ ಶೌರ್ಯ ತಿರಂಗ ಯಾತ್ರೆ’ಯನ್ನು ಪ್ರಾರಂಭಿಸಿ ಮಾತನಾಡಿದ ಯೋಗಿ, ಅಮಾನವೀಯ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂದೂರ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದರು.
ಬಿಜೆಪಿ ಇಡೀ ದೇಶದಲ್ಲಿ ತಿರಂಗ ಯಾತ್ರೆಯನ್ನು ಆಯೋಜಿಸುತ್ತಿದೆ. ಈ ತಿರಂಗ ಭಾರತದ ಗೌರವ, ಪ್ರತಿಷ್ಠೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ಈ ತಿರಂಗ ಭಾರತದ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿದೆ. ಈ ತಿರಂಗ ಮತ್ತು ನಮ್ಮ ಸೈನಿಕರಿಗೆ ನಮ್ಮ ಗೌರವವನ್ನು ತೋರಿಸಲು, ಪ್ರಧಾನಿ ಮೋದಿಜಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ವೇದಿಕೆಯಾಗಲಿದೆ ಎಂದು ಹೇಳಿದರು.