ನಾವು ಯುದ್ಧದಲ್ಲಿ ಭಾಗಿಯಾಗುವುದಿಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಯುದ್ಧದಲ್ಲಿ ಭಾಗಿಯಾಗುವುದಿಲ್ಲ, ಮೂಲಭೂತವಾಗಿ ನಮಗೂ ಇದಕ್ಕೂ ಸಂಬಂಧವಿಲ್ಲ ಎಂದು ಅಮೆರಿಕ ಹೇಳಿದೆ.

ಭಾರತ ಮತ್ತು ಪಾಕಿಸ್ತಾನವನ್ನು ನಾವು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ, ಎರಡೂ ದೇಶಗಳಿಂದ ಪರಮಾಣು ದಾಳಿಯಾದರೆ ಉಂಟಾಗುವ ಸಮಸ್ಯೆಗಳ ಬಗ್ಗೆ ನಮಗೆ ಕಳವಳವಿದೆ. ಪರಮಾಣು ಶಸ್ತ್ರಸಜ್ಜಿತ ಉಭಯ ರಾಷ್ಟ್ರಗಳ ಉದ್ವಿಗ್ನತೆಯನ್ನು ಕಡಿಮೆ ಮಾಡಲು ನಾವು ಪ್ರಯತ್ನಿಸಬಹುದು ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹೇಳಿದ್ದಾರೆ.

ಎರಡು ಪರಮಾಣು ಶಕ್ತಿಗಳು ಡಿಕ್ಕಿ ಹೊಡೆದು ಉಂಟಾಗುವ ದೊಡ್ಡ ಸಂಘರ್ಷದ ಬಗ್ಗೆ ನಾವು ಕಳವಳಗೊಂಡಿದ್ದೇವೆ. ಸಾಧ್ಯವಾದಷ್ಟು ಬೇಗ ಉದ್ವಿಗ್ನತೆ ಕುಗ್ಗಲಿ ಎಂದು ಅಮೆರಿಕ ಬಯಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!