ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಬಂದ್‌ನಿಂದ ಸರ್ಕಾರ ಜನಸಾಮಾನ್ಯರಿಗೆ, ದಿನಗೂಲಿಗಳಿಗೆ, ಬಡವರಿಗೆ ತೊಂದರೆಯಾಗುತ್ತದೆ. ಹೀಗಾಗಿ ಬಂದ್‌ಗೆ ನನ್ನ ಬೆಂಬಲ ಇಲ್ಲ. ಎಲ್ಲದಕ್ಕೂ ಬಂದ್ ಎಂದರೆ ಹೇಗೆ ಎಂದು ಪ್ರಶ್ನಿಸಿದರು.
ಬೆಳಗಾವಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆ ಸಂಬಂಧ ದೊಡ್ಡ ಸ್ವರೂಪದ ಚಳವಳಿ ನಡೆಸಿದ್ದೇವೆ. ಇದರಿಂದ ನಿರ್ವಾಹಕನ ಮೇಲೆ ಹೂಡಲಾಗಿದ್ದ ಸುಳ್ಳು ಪೋಕೋ ದೂರನ್ನು ಹಿ೦ಪಡೆಯಲಾಗಿದೆ. ಮೊದಲಿನಿಂದ ಕರವೇ ತೀರಾ ಅನಿವಾರ್ಯ ಸಂದರ್ಭ ಹೊರತುಪಡಿಸಿ ಕರ್ನಾಟಕ ಬಂದ್ ಕರೆಗಳಿಗೆ ಕೈಜೋಡಿಸಿಲ್ಲ. ಹೀಗಾಗಿ ಬಂದ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.