ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಅತಿಯಾದ ಮಳೆಯಿಂದ ರಾಜ್ಯದಾದ್ಯಂತ ಸಾಕಷ್ಟು ಬೆಳೆ ನಾಶವಾಗಿದ್ದು, ಈಗಾಗಲೇ ಜಂಟಿ ಸಮೀಕ್ಷೆ ಮಾಡಲು ಹೇಳಿದ್ದೇವೆ. ರೈತರಿಗೆ ಆದಷ್ಟು ಬೇಗ ಪರಿಹಾರ ಕೊಡುತ್ತೇವೆ. ದುಡ್ಡಿಗೆ ಕೊರತೆ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನಮ್ಮ ದೇಶ ಕೃಷಿ ಪ್ರಧಾನ ರಾಷ್ಟ್ರ. ನಾಗರಿಕತೆ ಆರಂಭ ಆದ ಮೇಲೆ ಕೃಷಿಯನ್ನೇ ಮಾಡುತ್ತ ಬರಲಾಗಿದೆ. ಭಾರತದಲ್ಲಿ ಜನಸಂಖ್ಯೆ ಏರುತ್ತಿದೆ. ಇಡೀ ಜಗತ್ತಲ್ಲೇ ಹೆಚ್ಚು ಜನಸಂಖ್ಯೆ ಇರುವ ದೇಶ ಭಾರತ. ಚೀನಾ ಜನಸಂಖ್ಯೆಯಲ್ಲಿ ಮುಂದೆ ಇತ್ತು. ಈಗ ನಾವು ಅವರನ್ನು ಹಿಂದೆ ಹಾಕಿ ಮುಂದೆ ಬಂದಿದ್ದೇವೆ. ಇಷ್ಟೂ ಜನರಿಗೆ ಆಹಾರ ಹಾಕಬೇಕು. ದೇಶದಲ್ಲಿ ಹಸಿರು ಕ್ರಾಂತಿ ಆದ ಮೇಲೆ ಆಹಾರ ಭದ್ರತೆ ಬಂದಿದೆ. ಆಹಾರ ಉತ್ಪಾದನೆ ಈಗ ಆಗುತ್ತಿಲ್ಲ, ಅದು ಸ್ಥಗಿತ ಆಗಿದೆ. ಇದಕ್ಕೆ ಕಾರಣ ಮಣ್ಣಿನ ಫಲವತ್ತತೆ. ಇದನ್ನು ಕೃಷಿ ವಿವಿಯವರು ಗಮನಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.