ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಮಾರಸ್ವಾಮಿ ಮತ್ತು ಆರ್.ಅಶೋಕ್ ಮುಖ್ಯಮಂತ್ರಿಯಾಗಲು ಕಾಯುತ್ತಿದ್ದಾರೆ. ಆದರೆ ನಾವು ಐದು ವರ್ಷ ಆಡಳಿತ ನಡೆಸುತ್ತೇವೆ. ನಮಗೆ ಯಾರೂ ತೊಂದರೆ ಕೊಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಂಡೂರು ಉಪಚುನಾವಣೆಯಲ್ಲಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಸಂಡೂರಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ ನಡೆಸಿತು. ಈ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜನರ ಆಶೀರ್ವಾದ ಇರುವವರೆಗೂ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ, ಜಗ್ಗಿಸಲು ಸಾಧ್ಯವಿಲ್ಲ ಎಂದರು.
ಮೊದಲು ಜನರ ಮನಸ್ಸು ಗೆಲ್ಲಿ, ಅಪಪ್ರಚಾರ ಮಾಡುವುದನ್ನು ಬಿಡಿ. ಟೀಕೆ ಮಾಡಲು ಸುಳ್ಳು ಆರೋಪ, ಅಪಪ್ರಚಾರ ಮಾಡಬೇಡಿ ಎಂದು ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಸಿಎಂ ಕಿಡಿಕಾರಿದರು.